Latest

ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಮದುವೆ ವಯಸ್ಸಿಗೆ ಬಂದಿರುವ ತನ್ನ ಇಬ್ಬರು ಹೆಣ್ಣುಮಕ್ಕಳ ಜೊತೆ ತಾಯಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಧಾರುಣ ಘಟನೆ ತೆಲಂಗಾಣದ ಖಮ್ಮಂನಲ್ಲಿ ನಡೆದಿದೆ.

ಗೋವಿಂದಮ್ಮ (48,) ರಾಧಿಕಾ (30), ರಮ್ಯ(28) ಆತ್ಮಹತ್ಯೆ ಮಾಡಿಕೊಂಡಿರಿರುವ ತಾಯಿ-ಮಕ್ಕಳು. ಪತಿ ಚಿನ್ನದ ಕೆಲಸ ಮಾಡುತ್ತಿದ್ದ.

Home add -Advt

ಹಿರಿಯ ಮಗಳಿಗೆ ಜನವರಿಯಲ್ಲಿ ಮದುವೆ ನಿಶ್ಚಯವಾಗಿತ್ತು. ಆದರೆ ಕೊರೊನಾ ಮಹಾಮಾರಿಯಿಂದಾಗಿ ಜೀವನ ನಿರ್ವಹಣೆ ಮದುವೆ ಖರ್ಚು ನಿಭಾಯಿಸುವುದು ಕಷ್ಟವಾಗುತ್ತಾ ಬಂದಿತ್ತು. ಇದೇ ಚಿಂತೆಯಲ್ಲಿದ್ದ ತಾಯಿ ಹಾಗೂ ಇಬ್ಬರು ಹೆಣ್ಣುಮಕ್ಕಳು, ತಂದೆ ಕೆಲಸಕ್ಕೆ ಹೋಗಿದ್ದ ವೇಳೆ ಚಿನ್ನ ಶುಚಿಗೊಳಿಸುವ ರಾಸಾಯನಿಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Related Articles

Back to top button