ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಲಾರಿಗೆ ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ಇನ್ನೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಮೃತಪಟ್ಟಿದ್ದು ಇನ್ನೊಬ್ಬ ಗಂಭೀರ ಗಾಯಗೊಂಡಿದ್ದಾನೆ.
ಅಥಣಿ ತಾಲೂಕಿನ ಕಟಗೇರಿ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಥಣಿಯ ಕುಮಾರ ಸಿದ್ದಪ್ಪ ಮೇತ್ರಿ (28 ) ಮೃತಪಟ್ಟವ.
ಆರೋಪಿ ಸಿದ್ಧಾರ್ಥ ಅಪ್ಪಣ್ಣ ಮಾಳಿ ಎಂಬಾತ ಕಟಗೇರಿಯಿಂದ ಅಥಣಿ ಕಡೆ ಅತಿವೇಗದಲ್ಲಿ ಬೈಕ್ ಚಲಾಯಿಸಿಕೊಂಡು ಲಾರಿಯೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ಮುತ್ತಪ್ಪ ನಾಗಪ್ಪ ಯಂಕಚ್ಚಿ ಎಂಬುವವರ ಬೈಕ್ ಗೆ ಡಿಕ್ಕಿಹೊಡೆದಿದ್ದಾನೆ. ಮುತ್ತಪ್ಪ ಅವರ ಬೈಕ್ ನ ಹಿಂಬದಿ ಸೀಟಿನ ಸವಾರ ಕುಮಾರ ಅವರ ತಲೆ ಹಾಗೂ ಮುಖಕ್ಕೆ ತೀವ್ರ ಏಟುಗಳಾಗಿ ಅವರು ಮೃತಪಟ್ಟಿದ್ದಾರೆ. ಮುತ್ತಪ್ಪ ಅವರ ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿವೆ.
ಈ ಕುರಿತು ದುಂಡವ್ವ ಕುಮಾರ ಮೇತ್ರಿ ಅವರು ಅಥಣಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ಮುಂದುವರಿದಿದೆ.
ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಮೇಲೆ ಗುಂಡಿನ ದಾಳಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ