Latest

*ಮಗಳ ಮದುವೆಗೆ ಸಿದ್ಧತೆ ನಡೆಸಿದ್ದ ಅಧಿಕಾರಿ ಅಪಘಾತದಲ್ಲಿ ಸಾವು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಎಲಿವೇಟೆಡ್ ಫ್ಲೈಓವರ್ ಅಧಿಕಾರಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಿ.ಮಂಜುನಾಥ್ (52) ಮೃತ ಎಲಿವೇಟೆಡ್ ಫ್ಲೈಓವರ್ ಅಧಿಕಾರಿ. ಫ್ಲೈಓವರ್ ಮೇಲೆ ಕೆಟ್ಟು ನಿಂತಿದ್ದ ಕಾರು ತೆರವು ಮಾಡುತ್ತಿದ್ದ ವೇಳೆ ಟೋಲ್ ವಾಹನ, ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಟಾಟಾ ಏಸ್ ವಾಹನ ಪಲ್ಟಿಯಾಗಿ ಬಿದ್ದಿದೆ. ಸರಣಿ ಅಪಘಾತದಲ್ಲಿ ಮಂಜುನಾಥ್ ಹಾಗೂ ಇನ್ನೋರ್ವ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಅಷ್ಟರಲ್ಲೇ ಮಂಜುನಾಥ್ ಸಾವನ್ನಪ್ಪಿದ್ದಾರೆ. ಗಾಯಾಳು ಸಿಬ್ಬಂದಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

Home add -Advt

ಮಾಹಿತಿ ಪ್ರಕಾರ ಮಂಜುನಾಥ್ ಅವರು ಆಗಸ್ಟ್ 10ರಂದು ಮಗಳ ಮದುವೆಗೆ ಸಿದ್ಧತೆ ಮಾಡುತ್ತಿದ್ದರು. ಬೆಳಿಗ್ಗೆ ವೇಳೆ ಆಮಂತ್ರಣ ಪತ್ರಿಗೆಗಳನ್ನು ಹಂಚುತ್ತಿದ್ದರು. ಹಾಗಾಗಿ ನೈಟ್ ಶಿಫ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಪಾಳಿಯ ವೇಳೆ ಕೆಲಸ ನಿರ್ವಹಿಸುತ್ತಿದ್ದಾಗಲೇ ಅಪಘಾತಕ್ಕೆ ಬಲಿಯಾಗಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button