*ಭೀಕರ ಅಪಘಾತ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಟಿಟಿ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸುಣ್ಣಕಲ್ಲು ಕ್ರಾಸ್ ಬಳಿ ಈ ಫ಼್ದುರಂತ ಸಂಭವಿಸಿದೆ. ದಂಪತಿ ಮೃತರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯವರೆಂದು ತಿಳಿದುಬಂದಿದೆ. ಸ್ವಗ್ರಾಮದಿಂದ ಬೆಂಗಳೂರಿಗೆ ಬೈಕ್ ಗೆ ಕೆಲಸಕ್ಕೆಂದು ತೆರಳುತ್ತಿದ್ದರು. ಮೃತ ದಂಪತಿಯನ್ನು ರಾಮಾಂಜಲು ಹಾಗೂ ಕಲಾವತಿ ಎಂದು ಗುರುತಿಸಲಾಗಿದೆ. ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. … Continue reading *ಭೀಕರ ಅಪಘಾತ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ*
Copy and paste this URL into your WordPress site to embed
Copy and paste this code into your site to embed