
ಪ್ರಗತಿವಾಹಿನಿ ಸುದ್ದಿ : ಕೇರಳದ ಕಾಸರಗೋಡು ಸಮೀಪ ರಣಭೀಕರ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ವೇಗವಾಗಿ ಬಂದ ಕಾರು ಡಿವೈಡರ್‌ಗೆ ಡಿಕ್ಕಿಯಾದ ಪರಿಣಾಮ ಮೂವರು ಸಾವನಪ್ಪಿದ್ದು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ವಾಮಂಜೂರು ಚೆಕ್ ಪೋಸ್ಟ್ ಬಳಿ ದುರ್ಘಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್‌ಗೆ ಡಿಕ್ಕಿಯಾಗಿದೆ. ಮೃತಪಟ್ಟವರನ್ನು ಜನಾರ್ದನ, ವರುಣ್ ಹಾಗೂ ಕಿಶನ್ ಎಂದು ಗುರುತಿಸಲಾಗಿದೆ. ರತ್ನಾ ಎಂಬುವರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಉಪ್ಪಳದ ಪೈವಳಿಕೆ ಬಾಯಿಕಟ್ಟೆ ನಿವಾಸಿಗಳು ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗಾಗಲೇ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ