Kannada NewsKarnataka NewsLatest

ಕಿತ್ತೂರು ಬಳಿ ಭೀಕರ ಅಪಘಾತ: ಇಬ್ಬರ ಸಾವು

 ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು – ತಾಲೂಕಿನ ಇಟಗಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಎರಡು ಲಾರಿಗಳ ನಡುವೆ ಅಪಘಾತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಓರ್ವನಿಗೆ ಗಂಭಿರ ಗಾಯವಾಗಿದ್ದು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಳಗಾವಿಯಿಂದ ಧಾರವಾಡ ಕಡೆಗೆ ಹೊರಟಿರುವ ಲಾರಿ ಇಟಗಿ ಕ್ರಾಸ್ ರಾಷ್ಟ್ರೀಯ ಹೆದ್ದಾರಿ ಮೇಲೆ ಕೆಟ್ಟು ನಿಂತಿದ್ದರಿಂದ ಅವರಿಗೆ ಸಂಬಂಧಪಟ್ಟ ಇನ್ನೊಂದು ಲಾರಿ ಚಾಲಕ ಇಬ್ಬರು ಸೇರಿ ಲಾರಿ ಹಿಂಬದಿಯಲ್ಲಿ ನಿಂತು ಅದನ್ನು ಸರಿಪಡಿಸುವ ವೇಳೆ ಮತ್ತೊಂದು ಲಾರಿ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿ ಓರ್ವ ಚಾಲಕ ಸಾವನ್ನಪ್ಪಿದ್ದು, ಇನ್ನೋರ್ವ ಚಾಲಕ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.
ಗದಗ ಜಿಲ್ಲೆಯ ಗಜೇಂದ್ರಗಡ ನಿವಾಸಿ ಕುಡ್ಲೆಪ್ಪ ನೆಲ್ಲೂರ(42), ಗದಗ ಜಿಲ್ಲೆಯ ವಿರಾಪೂರ ಗ್ರಾಮದ ನಿವಾಸಿ ಯಲ್ಲಪ್ಪ ಸಣ್ಣಯಲ್ಲಪ್ಪ ಗೋರ್ಪಡೆ(52) ಮೃತಪಟ್ಟಿದ್ದಾರೆ. ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಚಾಲಕ ರಾಕೇಶ(37) ಗಂಭಿರ ಗಾಯಗೊಂಡಿದ್ದು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.
ಘಟನಾ ಸ್ಥಳಕ್ಕೆ ಕಿತ್ತೂರು ಸಿಪಿಐ ಮಂಜುನಾಥ ಕುಸಗಲ್, ಪಿಎಸ್‍ಐ ದೇವರಾಜ ಉಳ್ಳಾಗಡ್ಡಿ ಭೇಟಿ ನೀಡಿದ್ದಾರೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Related Articles

Back to top button