ಪ್ರಗತಿವಾಹಿನಿ ಸುದ್ದಿ, ಬೆಳಗಾವಿ -ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮಗು ಸೇರಿ ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
ವಂಟಮೂರಿ ಘಾಟ್ ಬಳಿ ಇರುವ ರಾಮ್ ದಾಬಾ ಹತ್ತಿರ ಸ್ವಲ್ಪ ಹೊತ್ತಿನ ಮೊದಲು ಈ ಘಟನೆ ನಡೆದಿದೆ. ಬೈಕ್ ನಲ್ಲಿ ಮಗು ಸೇರಿ ನಾಲ್ವರು ಪ್ರಯಾಣಿಸುತ್ತಿದ್ದರು. ಬೈಕ್ ಗೆ ಬಸ್ ಡಿಕ್ಕಿ ಹೊಡೆದಿದೆ.
ಮೃತರ ವಿವರ ಇನ್ನಷ್ಟೆ ಸಿಗಬೇಕಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಅಪಗಾತ ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರಿದ್ದು, ರಸ್ತೆ ಸಂಚಾರಕ್ಕೆ ಕೆಲಹೊತ್ತು ಅಡಚಣೆ ಉಂಟಾಗಿತ್ತು.
ಹಿಂದೂ ಹುಡುಗಿ ಮುಸ್ಲಿಂ ಹುಡುಗನ ಜೊತೆ ಮಲಗಬೇಕಂತೆ
ಭೀಕರ ಅಪಘಾತ: ನಾಲ್ವರ ಸಾವು, ಪೊಲೀಸ್ ವಾಹನಕ್ಕೆ ಬೆಂಕಿ, ಪಿಎಸ್ಐ ಮೇಲೆ ಹಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ