Belagavi NewsBelgaum NewsKarnataka NewsTravel

*ನಿಪ್ಪಾಣಿ-ಮುಧೋಳ ಹೆದ್ದಾರಿಯಲ್ಲಿ ಅಪಘಾತ: ಮಹಿಳೆ ಸಾವು*

ಪ್ರಗತಿವಾಹಿನಿ ಸುದ್ದಿ: ಕಾರು ಹಾಗೂ ಕೆಎಸ್ಆರ್ ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ನಡೆದಿದೆ.‌ 

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದ ಬಳಿಯ ನಿಪ್ಪಾಣಿ – ಮುಧೋಳ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ಮಲ್ ಭರಮು ಅವಟೆ (60) ಎಂಬ ಮಹಿಳೆ ಸಾವನ್ನಪ್ಪಿದ್ದಾಳೆ.‌

ಹೆಸ್ಕಾಂ ಚಿಕ್ಕೋಡಿ ಉಪವಿಭಾಗ ಸಹಾಯಕ ಅಭಿಯಂತ ನೇಮಿನಾಥ ಬರಮು ಅವಟೆ ಕಾರು ಅಪಘಾತವಾಗಿದೆ. ಅದೃಷ್ಟವಶಾತ ಕಾರಿನ ಎರಡು ಏರ್ ಬ್ಯಾಗ್ ಗಳು ಓಪನ್ ಆಗಿದ್ದರಿಂದ ಕಾರಿನಲ್ಲಿರುವ ಹೆಸ್ಕಾಂ ಇಂಜಿನಿಯರ್ ಬದುಕುಳಿದಿದ್ದಾರೆ. ಆದರೆ ಕಾರಿನ ಹಿಂದಿನ ಸೀಟಿನಲ್ಲಿ ಕುಳಿತಿದ್ದ ನೇಮಿನಾಥ ನಿರ್ಮಲ ಭರಮು ಅವಟೆ (60) ಅವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. 

ಮೂಲತಃ ರಾಯಬಾಗ ಪಟ್ಟಣದ ಅವಟೆ ಕುಟುಂಬ ಚಿಕ್ಕೋಡಿ ನಗರದ ಯಾದವ್ ನಗರದಲ್ಲಿ ವಾಸಿಸುತ್ತಿದ್ದರು. ಗಾಯವಾದ ಹೆಸ್ಕಾಂಅಭಿಯಂತ ನೇಮಿನಾಥ ಅವರಿಗೆ ಚಿಕ್ಕೋಡಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.‌ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.‌

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button