
ಪ್ರಗತಿವಾಹಿನಿ ಸುದ್ದಿ: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದು ಎಸ್ಕೇಪ್ ವಾಗಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಾಜ್ಯ ರಾಜಧಾನಿ ಬೆಂಗಳೂರಿನ ಯಲಹಂಕದ ಕೋಗಿಲು ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಅಪರಿಚಿತವಾಹನ ಬೈಕ್ ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರರೈಯಾಗಿದೆ, ಆದರೆ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.