Kannada NewsKarnataka News

*ಗಣೇಶ ತರಲು ತೆರಳಿದ್ದ ವೇಳೆ ಅವಘಡ: ಇಬ್ಬರು ಯುವಕರ ಸಾವು*

ಪ್ರಗತಿವಾಹಿನಿ ಸುದ್ದಿ: ಎಲ್ಲಡೆ ಗಣೇಶ ಚತುರ್ಥಿಯ ಸಂಭ್ರಮ ಮನೆ ಮಾಡಿದೆ ಆದರೆ ಗಣೇಶನ ಪ್ರತಿಷ್ಠಾಪಿಸುವ ವೇಳೆ ಇಬ್ಬರ ಯುವಕರು ಸಾವನ್ನಪ್ಪಿದ್ದಾರೆ. 

ಗಣಪತಿ ತರಲು ಹೋಗುತ್ತಿದ್ದ 9 ಜನ ಯುವಕರಿದ್ದ ಟಾಟಾ ಏಸ್ ಅಪಘಾತಕ್ಕೊಳಗಾಗಿದೆ. ಗಣೇಶನ ತರಲು ಟಾಟಾ ಏಸ್ ಆಟೋ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆಟೋ ಪಲ್ಟಿ ಆಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ದುರ್ಘಟನೆ ನಡೆದಿದೆ. ಶ್ರೀಧರ್ (20) ಧನುಷ್ (20) ಮೃತ ಯುವಕರಾಗಿದ್ದಾರೆ. ಈ ಅಪಘಾತದಲ್ಲಿ ಮತ್ತೆ ಇಬ್ಬರು ಯುವಕರ ತಲೆಗೆ ಗಂಭೀರ ಗಾಯಗಳಾಗಿ ಅವರಿಬ್ಬರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ರವಾನಿಸಲಾಗಿದೆ. ಅಲ್ಲದೇ ವಾಹನದಲ್ಲಿದ್ದ ಮೂವರು ಯುವಕರಿಗೆ ಹೆಚ್ಚಿನ ಗಾಯವಾಗಿದ್ದು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೃತರು ಹಾಗೂ ಗಾಯಾಳುಗಳೆಲ್ಲಾ ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ. ಗಣಪತಿ ತರಲು ಟಾಟಾ ಏಸ್ ನಲ್ಲಿ ತರೀಕೆರೆಗೆ ಯುವಕರು ಹೋಗುತ್ತಿದ್ದರು ಈ ವೇಳೆ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿ ಆಗಿದೆ. ಲಿಂಗದಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ . ಗಣೇಶನ ಹಬ್ಬದ ಖುಷಿಯಲ್ಲಿದ್ದ ಊರಿಗೆ ಇದೀಗ ಸೂತಕದ ಛಾಯೆ ಆವರಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button