
ಪ್ರಗತಿವಾಹಿನಿ ಸುದ್ದಿ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ವಾಪಸ್ ಆಗುವಾಗ ರಾಯಚೂರು ಮೂಲದ ವ್ಯಕ್ತಿಯೋರ್ವ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮಧ್ಯಪ್ರದೇಶದ ಮೇಹೂರ್ ಬಳಿ ಕಾರು ಡಿಕ್ಕಿಯಾದ ಪರಿಣಾಮ ಮಹಾದೇವ ವಾಲೇಕರ್ (48) ಎಂಬುವವರು ಸಾವನ್ನಪ್ಪಿದ್ದಾರೆ.
ರಾಯಚೂರಿನ ಚಂದ್ರಬಂಡಾ ಗ್ರಾಮದ ನಿವಾಸಿ ಮಹಾದೇವ ಅವರು ತಮ್ಮ ಕುಟುಂಬ, ಸ್ನೇಹಿತರೊಂದಿಗೆ ಕುಂಭಮೇಳಕ್ಕೆ ತೆರಳಿ ಊರಿಗೆ ಮರುಳುತ್ತಿದ್ದಾಗ ಮೇಹೂರ್ ಸಮೀಪ ರಸ್ತೆ ಬದಿ ಕಾರು ನಿಲ್ಲಿಸಿದ್ದರು. ಈ ವೇಳೆ ಕೆಳಗೆ ಇಳಿಯುವಾಗ ಅದೇ ಮಾರ್ಗದಲ್ಲಿ ಬರುತ್ತಿದ್ದ ಹೈದ್ರಾಬಾದ್ ಮೂಲದ ಮತ್ತೊಂದು ಕಾರು ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ರಾಯಚೂರಿನ ಚಂದ್ರಬಂಡಾ ಗ್ರಾಮದ ನಿವಾಸಿ ಮಹಾದೇವ ಅವರಿಗೆ ಕಾರು ಡಿಕ್ಕಿಯಾದ ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಿಸದೇ ಅಸುನೀಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ