Karnataka News

*ದೇವಸ್ಥಾನದಿಂದ ಮರಳುವಾಗ ಅಪಘಾತ: ನಾಲ್ವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸೇರಿ ಒಟ್ಟು 4 ಮಂದಿ ಸಾವನಪ್ಪಿರುವ ದುರ್ಘಟನ ಕಲಬುರಗಿ ಜಿಲ್ಲೆಯ ಕಮಲಾಪುರದ ಬಳಿ ನಡೆದಿದೆ.

ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಭೀಕರ ಅಪಘಾತದಲ್ಲಿ ಒಂದೆ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.‌ ಗೂಡ್ಸ್ ವಾಹನ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. 

ಭಾರ್ಗವ ಕೃಷ್ಣ(55), ಸಂಗೀತ (45), ಪುತ್ರ ರಾಘವ್, ಕಾರು ಚಾಲಕ ಸೇರಿ ಎಲ್ಲರೂ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಕಮಲಾಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತರೆಲ್ಲರೂ ಗಾಣಗಾಪುರ ದತ್ತಾತ್ರೇಯ ದೇಗುಲಕ್ಕೆ ಭೇಟಿ ನೀಡಿ ವಾಪಸ್ ಆಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಗೂಡ್ಸ್ ವಾಹನ ರಭಸದಿಂದ ಕಾರಿಗೆ ಡಿಕ್ಕಿಹೊಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಎಲ್ಲರೂ ಪ್ರಾಣಬಿಟ್ಟಿದ್ದಾರೆ.

Home add -Advt

Related Articles

Back to top button