Belagavi NewsBelgaum NewsKarnataka News

*ಕೆಲಸ ಮುಗಿಸಿ ವಾಪಸ್ ಆಗುವಾಗ ಅಪಘಾತ: ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ,ಬೆಳಗಾವಿ: ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ ಬಾಲಕ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 16 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ರಾಮದುರ್ಗ ತಾಲೂಕಿನ ಚುಂಚುನೂರು ಗ್ರಾಮದ 18 ಜನರು ಪಕ್ಕದ ಗ್ರಾಮಕ್ಕೆ ಹತ್ತಿ ಬಿಡಿಸಿ ವಾಪಸ್ ಆಗುವ ವೇಳೆ ತಡರಾತ್ರಿ ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ನೇರವಾಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನ ಪಲ್ಟಿಯಾಗಿದೆ.

Home add -Advt

ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಕೆಂಚಪ್ಪ ಲಕ್ಷ್ಮಣ ಈರನ್ನವರ (60) ಸ್ಥಳದಲ್ಲೇ ಮೃತಪಟ್ಟರೆ 16 ವರ್ಷದ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಅಪಘಾತದ ರಭಸಕ್ಕೆ ಕ್ರೂಸರ್ ವಾಹನ ಸಂಪೂರ್ಣ ಜಖಂ ಆಗಿದ್ದು, ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಇನ್ನು ಸ್ಥಳಕ್ಕೆ ಸವದತ್ತಿ ಪೋಲಿಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಇನ್ನು ವಾಹನದ ಬ್ರೇಕ್ ಫೇಲ್ ಅದ ಹಿನ್ನಲೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಚಾಲಕನಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.

Related Articles

Back to top button