Kannada NewsKarnataka NewsLatest

*ಓವರ್ ಟೇಕ್ ಮಾಡಲು ಹೋಗಿ ಅಪಘಾತ: ನಾಲ್ವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಸಾರಿಗೆ ಬಸ್ ಹಾಗೂ ಲಾರಿ ಮಧ್ಯೆ ಡಿಕ್ಕಿ ಸಂಭವಿಸಿದ್ದು ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಕೋಲಾರ-ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. 

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಈ ಘಟನೆ ನಡೆದಿದೆ. ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರ ಪ್ರದೇಶದ ಸಾರಿಗೆ ಬಸ್ ಗೊಟ್ಟಿಪುರ ಗೇಟ್ ಬಳಿ ವಾಹನವೊಂದನ್ನು ಓವರ್ ಟೇಕ್ ಮಾಡಲು ಹೋದಾಗ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ.

ಈ ಅಪಘಾತದಲ್ಲಿ ಕೇಶವರೆಡ್ಡಿ (44), ತುಳಸಿ (21), ಪ್ರಣತಿ (4) ಹಾಗೂ 1 ವರ್ಷದ ಮಗು ಸಾವನ್ನಪ್ಪಿದ್ದರೆ, 16 ಜನರಿಗೆ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ಬಸ್ಸು ಸಂಪೂರ್ಣ ಜಖಂ ಆಗಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

16 ಜನರ ಪೈಕಿ ಇಬ್ಬರ ಸ್ಥಿತಿ ಗಂಭೀರ ಎಂದು ತಿಳಿದುಬಂದಿದೆ. ಇನ್ನು ಈ ಘಟನೆಗೆ ಸಂಬಂಧಪಟ್ಟಂತೆ ಹೊಸಕೋಟೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Home add -Advt

Related Articles

Back to top button