Kannada NewsKarnataka NewsLatest

*ಭೀಕರ ಅಪಘಾತ: ಲೇಡಿ ಪೋಸ್ಟ್ ಮ್ಯಾನ್ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೈಕ್ ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದ ಮಹಿಳೆ ಮೇಲೆ ಲಾರಿ ಹರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಬಳಿ ನಡೆದಿದೆ.

ಪ್ರಿಯಾ (45) ಮೃತ ಮಹಿಳೆ. ಲೇಡಿ ಪೋಸ್ಟ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಿಯಾ ಬೈಕ್ ನಲ್ಲಿ ಪೋಸ್ಟ್ ಗಳನ್ನು ಕೊಡಲು ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬಂದ ಲಾರಿ ಬೈಕ್ ಗೆ ಡಿಕ್ಕಿಯಾಗಿ ನಿಯಂತ್ರಣ ತಪ್ಪಿದ ಪ್ರಿಯಾ ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಪ್ರಿಯಾ ಮೇಲೆಯೇ ಲಾರಿ ಹರಿದು ಹೋಗಿದೆ.

ಸ್ಥಳದಲ್ಲೇ ಪ್ರಿಯಾ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿನೀಡಿದ ಸೂರ್ಯನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button