ಪ್ರಗತಿವಾಹಿನಿ ಸುದ್ದಿ: ಭೀಕರ ಅಪಘಾತದಲ್ಲಿ 15 ಜನರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ನಡೆದಿದೆ.
ಪವಿತ್ರ ಗಂಗಾ ಸ್ನಾನಕ್ಕೆಂದು ಭಕ್ತರು ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ನದಿಗೆ ಉರುಳಿದೆ. 8 ಮಕ್ಕಳು ಸೇರಿ 15 ಜನರು ಮೃತಪಟ್ಟಿದ್ದಾರೆ.
ಹಲವರು ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ