
ಪ್ರಗತಿವಾಹಿನಿ ಸುದ್ದಿ: ಅಯೋಧ್ಯೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಾಜ್ಯದ ಮೂವರು ಭಕ್ತರು ಮೃತಪಟ್ಟಿರುವ ಘಟನೆ ನಡೆದಿದೆ.
ಕಾಶಿಯಿಂದ ಅಯೋಧ್ಯೆಗೆ ತೆರಳುತ್ತಿದ್ದ ಟಿಟಿ ವಾಹನ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಕಲಬುರ್ಗಿ ಮೂಲದ ಮೂವರು ಭಕ್ತರು ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಅಯೋಧ್ಯೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ಶಿವರಾಜ್, ಕಾಶಿನಾಥ್ ಹಾಗೂ ತಂಗೆಮ್ಮ ಎಂದು ಗುರುತಿಸಲಾಗಿದೆ. ಕಲಬುರಗಿಯ ಒಂದೇ ಕುಟುಂಬದ 22 ಜನರು ತೀರ್ಥಯಾತ್ರೆಗೆಂದು ಕಾಶಿಗೆ ತೆರಳಿದ್ದರು. ಕಾಶಿ ವಿಶ್ವನಾಥನ ದರ್ಶನ ಪಡೆದ ಬಳಿಕ ನಿನ್ನೆ ಟಿಟಿ ವಾಹನದಲ್ಲಿ ಅಯೋಧ್ಯೆಗೆ ತೆರಳುತ್ತಿದ್ದರು. ಈ ವೇಳೆ ಅಯೋಧ್ಯೆ ಬಳಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ