Politics

*ಸಿ.ಟಿ.ರವಿ ಪದ ಬಳಕೆ ಕ್ರಿಮಿನಲ್ ಅಫೆನ್ಸ್: ಸಿಎಂ ಸಿದ್ದರಾಮಯ್ಯ ಆಕ್ರೋಶ*

ಕಾನೂನು ಪ್ರಕಾರ ಕ್ರಮ


ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Home add -Advt

ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿ.ಟಿ.ರವಿ ಅಂತಹ ಪದ ಬಳಕೆ ಮಾಡಿದ್ದು ಕ್ರಿಮಿನಲ್ ಅಫೆನ್ಸ್. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪೊಲೀಸರಿಗೂ ದೂರು ನೀಡಲು ಮುಂದಾಗಿದ್ದಾರೆ. ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ ನೋಡಬೇಕು.

ವಿಧಾನಪರಿಷತ್ ಸಭಾಪತಿ ಯವರಿಗೆ ದೂರು ನೀಡಲಾಗಿದೆ. ಸಿ. ಟಿ.ರವಿ ಆಕ್ಷೇಪಾರ್ಹ ಪದ ಬಳೆ ಮಡಿರುವ ಬಗ್ಗೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪರಿಷತ್ ಸದಸ್ಯರಾಗಲಿ ಯಾರೇ ಆಗಲಿ ಇಂತಹ ಪದ ಬಳಕೆ ಸರಿಯಲ್ಲ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಬಹಳ ಕೆಟ್ಟ ಪದ ಬಳಕೆ ಮಾಡಿದ್ದಾರೆ. ಇದು ಖಂಡನೀಯ. ಸಚಿವರು ತೀವ್ರವಾಗಿ ನೊಂದಿದ್ದಾರೆ. ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸಿ. ಟಿ ರವಿ ಅವಾಚ್ಯ ಪದ ಬಳಕೆ

ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು: ಸಿಎಂ ಸಿದ್ದರಾಮಯ್ಯ

ಡಿಸೆಂಬರ್ , ಡಿಸೆಂಬರ್ 19 : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ ಸಭಾಪತಿಯವರಿಗೂ ಹಾಗೂ ಪೊಲೀಸ್ ಠಾಣೆಗೂ ದೂರು ಸಲ್ಲಿಸಿರುವ ಮಾಹಿತಿ ದೊರೆತಿದ್ದು, ಪೊಲೀಸರು ಈ ಕ್ರಿಮಿನಲ್ ಅಪರಾಧ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು.

ಅವರು ಇಂದು ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಸಿಟಿ ರವಿಯವರು ಅವಾಚ್ಯ ಪದ ಬಳಕೆಯನ್ನು ಅಲ್ಲಗಳೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರು ಅವಾಚ್ಯ ಪದ ಬಳಸಿದ್ದಾರೆಂದು ಹಲವು ಸದಸ್ಯರು ಹೇಳುತ್ತಿದ್ದು, ತಾನು ವಿಧಾನಪರಿಷತ್ತಿನಲ್ಲಿ ಇರಲಿಲ್ಲ ಎಂದು ತಿಳಿಸಿದರು.

ಇಂತಹ ಪದಪ್ರಯೋಗದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನನೊಂದಿದ್ದು, ಇಂತಹ ಪದಬಳಕೆ ಒಂದು ರೀತಿಯ ಲೈಂಗಿಕ ದೌರ್ಜನ್ಯವಾಗಿದೆ. ಪೊಲೀಸರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Related Articles

Back to top button