*ಭೀಕರ ರಸ್ತೆ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೊಲೆರೋ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸಾವನಪ್ಪಿರುವ ಘಟನೆ ರಾಯಚೂರು ತಾಲೂಕಿನ ಹೆಗಸನಹಳ್ಳಿ ಬಳಿ ನಡೆದಿದೆ. ಹನುಮಾನ್ ಜಯಂತಿ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಪೂಜಾ ಕೈಂಕರ್ಯವಿತ್ತು. ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಿಂದ ಬಿಂದಿಗೆಯಲ್ಲಿ ನೀರು ತರುತ್ತಿದ್ದಾಗ ವೇಗವಾಗಿ ಬಂದ ಕೋಳಿ ಸಾಗಿಸುತ್ತಿದ್ದ ಬೊಲೆರೋ ವಾಹನ ಯುವಕರಿಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಯ್ಯನಗೌಡ, ಮಹೇಶ್ ಮತ್ತು ಉದಯ್ ಕುಮಾರ್ ಮೃತ ದುರ್ದೈವಿಗಳು. ಗಾಯಾಳುಗಳನ್ನು ರಿಮ್ಸ್ ಆಸ್ಪರೆಗೆ ದಾಖಲಿಸಲಾಗಿದೆ.Home add -Advt … Continue reading *ಭೀಕರ ರಸ್ತೆ ಅಪಘಾತ; ಮೂವರು ಸ್ಥಳದಲ್ಲೇ ದುರ್ಮರಣ*