
ಪ್ರಗತಿವಾಹಿನಿ ಸುದ್ದಿ: ಒಂದೇ ಬೈಕ್ ನಲ್ಲಿ ರೈಡ್ ಮಾಡುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪಿಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಒಂದೆ ಬೈಕ್ ನಲ್ಲಿ ಮೂವರು ಪ್ರಯಾಣಿಸುತ್ತಿದ್ದರು. ಆದರೆ ಏಕಾಏಕಿ ಟಾಟಾ ಏಸ್ ಡಿಕ್ಕಿಯಾಗಿ ಮೂವರು ಸಾವುವನ್ನಪ್ಪಿದ್ದಾರೆ. ಈ ಘಟನೆ ಬೆಂಗಳೂರಿನ ರಾಜ್ ಗೋಪಾಲನಗರ ಬಳಿಯ ಹೆಗ್ಗನಹಳ್ಳಿ ಬಳಿ ನಡೆದಿದೆ.
ನಿನ್ನೆ ರಾತ್ರಿ 11 ಘಂಟೆಯ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೂವರು ಯುವಕರು ಬೈಕ್‌ನಲ್ಲಿ ತೆರಳುತ್ತಿದ್ದರು. ಅದೇ ಸಂದರ್ಭದಲ್ಲಿ ಬಂದಿದ್ದ ಟಾಟಾ ಏಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲಿಯೇ ದುರ್ಮರಣ ಹೊಂದಿದ್ದಾರೆ. ಪೀಣ್ಯ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ