Kannada NewsKarnataka NewsLatest
*ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಟ್ರಕ್ ಹಾಗೂ ಟಾಟಾ ಏಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಸೇವಾನಗರ ತಾಂಡಾ ಬಳಿ ನಡೆದಿದೆ.
ಘಟನೆಯಲ್ಲಿ ಐವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಟಾಟಾ ಏಸ್ ವಾಹನದಲ್ಲಿ 14 ಜನರು ಉಗ್ಗೀರ್ ನಿಂದ ಹೈದರಾಬಾದ್ ಗೆ ತೆರಳುತ್ತಿದ್ದರು. ಈ ವೇಳೆ ಟ್ರಕ್ ಗೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ದಾವಲಸಾಬ್, ರಸೀದಾ ಶೇಕ್, ಟಾಟಾ ಏಸ್ ಚಾಲಕ ವಲಿ, ಅಮಾಮ್ ಶೇಖ್ ಸೇರಿ ನಾನ್ವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.



