Cancer Hospital 2
Beereshwara 36
LaxmiTai 5

*ಮತ್ತೊಂದು ಭೀಕರ ಅಪಘಾತ: ಮಕ್ಕಳು ಸೇರಿ 9 ಜನರು ದುರ್ಮರಣ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಬೊಲೆರೊ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿ 9 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ರಾಜಸ್ಥಾನದ ಕರೌಲಿಯಲ್ಲಿ ಈ ಅಪಘಾತ ಸಂಭವಿಸಿದೆ. ಬೊಲೆರೊದಲ್ಲಿ 13 ಜನರು ಕರೌಲಿ ಜಿಲ್ಲೆಯ ಕೊಯೋಲಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಾಸ್ ಆಗುತ್ತಿದ್ದರು. ಮಂದರಯಾಲ್ ರಸ್ತೆಯ ದುಂಡಾಪುರ ತಿರುವಿನಲ್ಲಿ ಬ್ಪ್ಲೆರೊ ವಾಹನಕ್ಕೆ ಟ್ರಕ್ ಡಿಕ್ಕಿಯಾಗಿದೆ. ಸ್ಥಳದಲ್ಲೇ 9 ಜನರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂದಿದ್ದಾರೆ.

Emergency Service

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಟ್ರಕ್ ಚಾಲಕನನ್ನು ಬಂಧಿಸಿದ್ದಾರೆ.


Bottom Add3
Bottom Ad 2