Kannada NewsKarnataka NewsTravel

*ಟೂರಿಸ್ಟ್ ವಾಹನಕ್ಕೆ ಆಕಸ್ಮಿಕ ಬೆಂಕಿ*

ಪ್ರಗತಿವಾಹಿನಿ ಸುದ್ದಿ: ಕಾರ್ಕಳದ ಪಶ್ಚಿಮ ಘಟ್ಟದ ಕುದುರೆಮುಖದ ಬಳಿ ಟೂರಿಸ್ಟ್ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ವಾಹನ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಉಡುಪಿಯ ಟೂರಿಸ್ಟ್ ವಾಹನದಲ್ಲಿ ಕಾರ್ಕಳ ಮಾಳ ಮಾರ್ಗವಾಗಿ ಕುದುರೆಮುಖದ ಮೂಲಕ ಕಳಸದ ಕಡೆಗೆ ಹನ್ನೊಂದು ಮಂದಿ ಪ್ರಯಾಣಿಸುತ್ತಿದ್ದರು. ಕುದುರೆಮುಖ ಸಮೀಪಿಸುತ್ತಿದ್ದಂತೆ ಟೂರಿಸ್ಟ್ ವಾಹನದಲ್ಲಿ ಏಕಾಏಕಿ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆ ವಾಹನದ ತುಂಬಾ ವ್ಯಾಪಿಸಿದೆ. ಅದೃಷ್ಟವಶಾತ್ ಚಾಲಕ ಸಹಿತ ವಾಹನದೊಳಗಿದ್ದವರು ಆತಂಕದಿಂದ ಹೊರಗೆ ಓಡಿಬಂದು ಪ್ರಾಣ ಉಳಿಸಿಕೊಂಡಿದ್ದಾರೆ.

ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಅಗ್ನಿಯ ಕೆನ್ನಾಲಿಗೆಗೆ ಇಡೀ ವಾಹನಕ್ಕೆ ವ್ಯಾಪಿಸಿದೆ. ಪರಿಣಾಮ ಸಂಪೂರ್ಣ ವಾಹನ ಸುಟ್ಟುಹೋಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕದಳದವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button