
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತಿರುಪತಿಗೆ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿ ಮೂಲದ ಐವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಆಗುತ್ತಿದ್ದಾಗ ಕ್ರೂಸರ್ ವಾಹನ ಭೀಕರ ಅಪಘಾತಕ್ಕೀಡಾಗಿದ್ದು, ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 11 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ಕೆವಿಪಲ್ಲಿ ತಾಲೂಕಿನ ಮಠಂಪಲ್ಲಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.
ಮೃತರು ಬೆಳಗಾವಿ ಮೂಲದವರು ಎಂದು ತಿಳಿದುಬಂದಿದೆ. ಆದರೆ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ರುಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂಧಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ