*ಭೀಕರ ಅಪಘಾತ: ಅಥಣಿ ಮೂಲದ ಒಂದೇ ಕುಟುಂಬದ ನಾಲ್ವರು ಸೇರಿ ಐವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ತಿರುಪತಿಗೆ ಪ್ರವಾಸಕ್ಕೆ ತೆರಳಿದ್ದ ಬೆಳಗಾವಿ ಮೂಲದ ಐವರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಲಭ್ಯವಾಗಿದ್ದು, ಮೃತರೆಲ್ಲರು ಅಥಣಿ ಮೂಲದವರಾಗಿದ್ದು, ಅವರಲ್ಲಿ ನಾಲ್ವರು ಒಂದೇ ಕುಟುಂಬ ಸದಸ್ಯರು ಎಂದು ತಿಳಿದುಬಂದಿದೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಚಿತ್ತೂರಿಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕ್ರೂಸರ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದಾರೆ. ಗಾಯಾಳುಗಳಲ್ಲಿ 7 ಜನರ ಸ್ಥಿತಿ ಗಂಭೀರವಾಗಿದೆ. ಆಂಧ್ರಪ್ರದೇಶದ ಕೆವಿಪಲ್ಲಿ ತಾಲೂಕಿನ ಮಠಂಪಲ್ಲಿ … Continue reading *ಭೀಕರ ಅಪಘಾತ: ಅಥಣಿ ಮೂಲದ ಒಂದೇ ಕುಟುಂಬದ ನಾಲ್ವರು ಸೇರಿ ಐವರು ದುರ್ಮರಣ*