Latest

ಅಪಘಾತಕ್ಕೀಡಾಗಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ ಬಸವರಾಜ ಹೊರಟ್ಟಿ

ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಕಾರು ಹಾಗೂ ದ್ವಿಚಕ್ರ ವಾಹನಗಳ ಮಧ್ಯೆ ಇಂದು ಬೆಳಿಗ್ಗೆ ಸುಮಾರು 10 ಗಂಟೆಯ ವೇಳೆ ಚಿತ್ರದುರ್ಗ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಿರಿಗೆರೆ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಓರ್ವ ಬಾಲಕ ಸೇರಿದಂತೆ ದಂಪತಿಯನ್ನು ಕೂಡಲೇ ಆಸ್ಪತ್ರೆಗೆ ಸಾಗಿಸುವ ಮೂಲಕ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾನವೀಯತೆ ಮೆರೆದಿದ್ದಾರೆ.

ಕಚೇರಿ ಕಾರ್ಯ ಕಲಾಪ ಮುಗಿಸಿ ಹುಬ್ಬಳ್ಳಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಬೆಳಿಗ್ಗೆ ಬೆಂಗಳೂರಿನಿಂದ ತೆರಳುತ್ತಿದ್ದ ಸಭಾಪತಿ ಬಸವರಾಜ ಹೊರಟ್ಟಿಯವರು ಮಾರ್ಗಮಧ್ಯದಲ್ಲಿ ಸಿರೆಗೆರೆ ಬಳಿ ತಮ್ಮ ಕಣ್ಣೆದುರಿಗೆ ಸಂಭವಿಸಿದ ಅಪಘಾತ ಗಮನಿಸಿ ಕೂಡಲೇ ತಮ್ಮ ವಾಹನ ನಿಲ್ಲಿಸಿ ಗಾಯಾಳುಗಳಿಗೆ ತಕ್ಷಣವೇ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿದರು. ಅಲ್ಲದೇ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಬೇಗನೆ ಸ್ಥಳಕ್ಕೆ ಆಗಮಿಸುವಂತೆ ಸೂಚಿಸಿದರು ಹಾಗೂ ಆಂಬುಲೆನ್ಸ್‍ಗೆ ಕರೆಮಾಡಿ ಮೂವರು ಗಾಯಾಳುಗಳನ್ನು ಶೀಘ್ರದಲ್ಲಿಯೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವಲ್ಲಿ ನೆರವಾದರು.

ಸುಮಾರು ಅರ್ಧ ಗಂಟೆಗಿಂತಲೂ ಹೆಚ್ಚು ಕಾಲ ಅಪಘಾತ ಸ್ಥಳದಲ್ಲಿಯೇ ಇದ್ದು ಗಾಯಾಳುಗಳಿಗೆ ಧೈರ್ಯ ಹೇಳಿ ಅವರಿಗೆ ತುರ್ತು ಚಿಕಿತ್ಸೆ ದೊರಕಿಸುವಲ್ಲಿ ಶ್ರಮಿಸಿದರು.

ವಿಕಲಚೇತನರಿಗಾಗಿ ವಿಶೇಷ ಶೌಚಾಲಯ, ನೂತನ ಸಭಾಭವನ ಕಟ್ಟಡ ಉದ್ಘಾಟಿಸಿದ ಲಕ್ಷ್ಮಿ ಹೆಬ್ಬಾಳಕರ್  

Home add -Advt

Related Articles

Back to top button