Latest

*ಭೀಕರ ಅಪಘಾತ; ಐವರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಮೃತಪಟ್ಟಿರುವ ಘಟನೆ ತೇಗೂರಿನ ಬಳಿ ನಡೆದಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಹಾಗೂ ಪಾದಚಾರಿ ಸೇರಿ ಐವರು ಮೃತಪಟ್ಟಿದ್ದಾರೆ. ಮೂವರು ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಳಗಾವಿಯಿಂದ ಧಾರವಾಡದ ಕಡೆಗೆ ತೆರಳುತ್ತಿತ್ತು. ಈ ವೇಳೆ ಎದುರಿನಿಂದ ಬಂದ ಲಾರಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

Home add -Advt

ಮೃತರು ಕಿತ್ತೂರಿನ ಔರಾದಿಯವರು ಎಂದು ಗೊತ್ತಾಗಿದೆ. ಬಸವರಾಜ, ನಾಗಪ್ಪ, ಮಹಾಂತೇಶ, ಕುಮಾರ ಮೃತರು. ಪಾದಚಾರಿ ಧಾರವಾಡದ ಈರಣ್ಣ ಸಹ ಸಾವಿಗೀಡಾಗಿದ್ದಾರೆ.

ಗರಗ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

*ಭ್ರಷ್ಟಾಚಾರ: ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡ ಸಿಎಂ ಬೊಮ್ಮಾಯಿ*

https://pragati.taskdun.com/cm-basavaraj-bommaividhanasabhekarnataka-budget/

Related Articles

Back to top button