Kannada NewsKarnataka NewsLatest

*ಭೀಕರ ಅಪಘಾತ; 6 ಜನರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಸಾಗರ್: ಕಾರು ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.

ಜಟಾಶಂಕರ ಕಣಿವೆ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಕಾರಿನಲ್ಲಿ 7 ಜನರಿದ್ದರು. ಅವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಇಬ್ಬರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ಎಸ್ ಪಿ ಅಭಿಷೇಕ್ ತಿವಾರಿ ತಿಳಿಸಿದ್ದಾರೆ. ಟ್ರಕ್ ಚಾಲಕನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button