
ಪ್ರಗತಿವಾಹಿನಿ ಸುದ್ದಿ: ಭೀಕರ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭಸಿದೆ.
ಅಪಘಾತದಲ್ಲಿ ಇಬ್ಬರು ಕೆಪಿಟಿಸಿಎಲ್ ಹಾಗೂ ಓರ್ವ ಬೆಸ್ಕಾಂ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ವೇಣುಗೋಪಾಲ್ (34) ಶ್ರೀಧರ್ (35) ಹಾಗೂ ಮಂಜಪ್ಪ (35) ಮೃತರು. ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಾಲ್ವರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ವಾಟದಹೊಸಹಳ್ಳಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದಿದೆ. ಘಟನಾ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ