Latest

*ಕೆರೆಗೆ ಉರುಳಿದ ಕಾರು: ಕೆಪಿಟಿಸಿಎಲ್, ಬೆಸ್ಕಾಂ ಸಿಬ್ಬಂದಿ ಸೇರಿ ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ಕಾರು ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ವಾಟದಹೊಸಹಳ್ಳಿ ಬಳಿ ಸಂಭಸಿದೆ.

Home add -Advt

ಅಪಘಾತದಲ್ಲಿ ಇಬ್ಬರು ಕೆಪಿಟಿಸಿಎಲ್ ಹಾಗೂ ಓರ್ವ ಬೆಸ್ಕಾಂ ಸಿಬ್ಬಂದಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ವೇಣುಗೋಪಾಲ್ (34) ಶ್ರೀಧರ್ (35) ಹಾಗೂ ಮಂಜಪ್ಪ (35) ಮೃತರು. ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಾಲ್ವರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ವಾಟದಹೊಸಹಳ್ಳಿ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿ ಬಿದ್ದಿದೆ. ಘಟನಾ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.


Related Articles

Back to top button