
ಪ್ರಗತಿವಾಹಿನಿ ಸುದ್ದಿ: ಲಾರಿ ಡಿಕ್ಕಿಯಾಗಿ ಕೆ.ಎಸ್.ಆರ್.ಟಿ.ಸಿ ಚೆಕಿಂಗ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ.
ಇಲ್ಲಿನ ಆಲೂರು ತಾಲೂಕಿನ ಪಾಳ್ಯಾ ಬಳಿ ಈ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ ಚೆಕಿಂಗ್ ಇನ್ಸ್ ಪೆಕ್ಟರ್ ಶಕುನಿಗೌಡ (57) ಮೃತರು. ಹೆದ್ದಾರಿಯಲ್ಲಿ ಬಸ್ ತಡೆದು ತಪಾಸಣೆ ನಡೆಸುತ್ತಿದ್ದ ವೇಳೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಪರುಣಾಮ ಚಕಿಂಗ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



