Karnataka News
*ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದಾಗ ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಹಾಸನಾಂಬೆ ದರ್ಶನ ಪಡೆದು ವಾಪಸ್ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ತಂದೆ-ಮಗಳುಸಾವನ್ನಪ್ಪಿರುವ ಘಟನೆ ಹಾಸನದ ತಣ್ಣೀರಹಳ್ಳದಲ್ಲಿ ನಡೆದಿದೆ.
ಕುಮಾರ್ (38) ಹಾಗೂ ಮಗಳು ಕಾವ್ಯ (12) ಮೃತ ದುರ್ದೌವಿಗಳು. ಕುಮಾರ್ ಅವರ ಪತ್ನಿ ಪುಟ್ಟಮ್ಮ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆದಾಖಲಿಸಲಾಗಿದೆ.
ಕುಟುಂಬ ಸಮೇತವಾಗಿ ಹಾಸನಾಂಬೆ ದರ್ಶನಕ್ಕೆಂದು ಬಂದು ದರ್ಶನ ಪಡೆದು ವಾಪಸ್ ಆಗುತ್ತಿದ್ದರು. ಹಾಸನಾಂಬೆ ದರ್ಶನ ಪಡೆದು ಬಳಿಕ ವಿಜಯನಗರದ ಸಂಬಂಧಿಕರ ಮನೆಗೆ ಹೋಗುತ್ತಿದ್ದರು. ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಸ್ವಿಫ್ಟ್ ಕಾರು ಡಿಕಿ ಹೊಡೆದಿದೆ. ಸ್ಥಳದಲ್ಲೇ ತಂದೆ ಹಾಗೂ ಮಗಳು ಸಾವನ್ನಪ್ಪಿದ್ದಾರೆ. ಪತ್ನಿ ಪುಟ್ತಮ್ಮ ಸ್ಥಿತಿ ಗಂಭೀರವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




