ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಅಪರಿಚಿತ ವಾಹನ ಡಿಕ್ಕಿಯಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಕಲ್ಲೇದೇವರಪುರ ಬಳಿ ನಡೆದಿದೆ.
ವಾಸುದೇವನ್ (52) ಮೃತ ಪ್ರಾಧ್ಯಾಪಕ. ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ವಾಸುದೇವನ್ ಕಾರ್ಯನಿರ್ವಹಿಸುತ್ತಿದ್ದರು. ಮಗ ಹಾಗೂ ಇಬ್ಬರು ವಿದ್ಯಾರ್ಥಿಗಳ ಜೊತೆ ತೆರಳುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.
ವಾಸುದೇವನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಉಳಿದ ಮೂವರನ್ನು ದಾವಣಗೆರೆ ಜಿಲ್ಲೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಗೂಗಲ್‌ನಲ್ಲಿ ಹೆಚ್ಚು ಶೋಧಿಸಲಾದ ಸೆಲೆಬ್ರಿಟಿಗಳ ಪಟ್ಟಿ ಬಿಡುಗಡೆ
https://pragati.taskdun.com/list-of-most-searched-celebrities-on-google-released/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ