Latest

*ಭೀಕರ ಅಪಘಾತ: ತಾಯಿ ಹಾಗೂ ಮಗ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕಂಟೇನರ್ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತದಲ್ಲಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಕೆಂಪುಹೊಳೆ ಬಳಿ ಈ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ನಾಲ್ವರು ಗಾಯಗೊಂಡಿದ್ದಾರೆ. ಬಂಟ್ವಾಳ ಮೂಲದ ತಾಯಿ ಸಫಿಯಾ (58) ಹಾಗೂ ಮಗ ಶಫಿಕ್ (20) ಮೃತ ದುರ್ದೈವಿಗಳು

ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಕಲೇಶಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button