Kannada NewsKarnataka NewsLatest

*ಭೀಕರ ಅಪಘಾತ; ಪೊಲೀಸ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡದ ಹೊರವಲಯದಲ್ಲಿ ನಡೆದಿದೆ.

ಇಟ್ಟಿಗಟ್ಟಿ ಬೈಪಾಸ್ ನಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಹುಚ್ಚೇಶ ಹಿರೇಗೌಡರ (37) ಮೃತ ಕಾನ್ಸ್ ಟೇಬಲ್. ಬೈಕ್ ಹಿಂಬದಿ ಕುಳಿತಿದ್ದ ಮಹಿಳಾ ಕಾನ್ಸ್ ಟೇಬಲ್ ಲಕ್ಷ್ಮೀ ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಗಾಯಾಳುವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಛಬ್ಬಿ ಗಣೇಶೋತ್ಸವ ಬಂದೋಬಸ್ತ್ ಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್ಸ್ ಟೇಬಲ್ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ.

ಧಾರವಾಡ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related Articles

Back to top button