*ಭೀಕರ ಅಪಘಾತ; SSLC ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮೂಡಲವಿಠಲಾಪುರದಲ್ಲಿ ನಡೆದಿದೆ. ಜಂಬರಘಟ್ಟ ನಿವಾಸಿ ಉಮ್ಮೆ ಕೂಲ್ಸುಂ ಮೃತ ವಿದ್ಯಾರ್ಥಿನಿ. ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ರಸ್ತೆ ದಾಟುತ್ತಿದ್ದಾಗ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.Home add -Advt ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎಸ್.ಎಸ್.ಎಲ್.ಸಿ ಪರೀಕ್ಷೆ ದಿನವೇ ಈ ದುರಂತ ಸಂಭವಿಸಿದೆ. *ಪರೀಕ್ಷೆ ದಿನವೇ SSLC ವಿದ್ಯಾರ್ಥಿ ಆತ್ಮಹತ್ಯೆ*