Latest

*ಭೀಕರ ಅಪಘಾತ; ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಹಾಸ್ಟೇಲ್ ನಿಂದ ಕಾಲೇಜಿಗೆ ತೆರಳುತ್ತಿದ್ದ ಮೂವರು ವಿದ್ಯಾರ್ಥಿನಿಯರಿಗೆ ಜಲ್ಲಿ ತುಂಬಿದ್ದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಣ್ಣಮನೆ ಸೇತುವೆ ಬಳಿ ನಡೆದಿದೆ.

ಪ್ರತಿಮಾ (18) ಮೃತ ವಿದ್ಯಾರ್ಥಿನಿ. ಅಪಘಾತದಲ್ಲಿ ಅಂಕಿತಾ ಹಾಗೂ ಐಶ್ವರ್ಯ ಎಂಬ ಇನ್ನಿಬ್ಬರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಮೂವರು ವಿದ್ಯಾರ್ಥಿನಿಯರು ಹಾಸ್ಟೇಲ್ ನಲ್ಲಿದ್ದು, ಸಾಗರ ಪದವಿಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಇಂದು ಕಾಲೇಜಿಗೆ ಹೋಗುತ್ತಿದ್ದಾಗ ಸಣ್ಣಮನೆ ಸೇತುವೆ ಬಳಿ ವೇಗವಾಗಿ ಬಂದ ಟಿಪ್ಪರ್ ವಿದ್ಯಾರ್ಥಿನಿಯರಿಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ ವಿದ್ಯಾರ್ಥಿನಿ ಪ್ರತಿಮಾ ಮೇಲೆಯೇ ಲಾರಿ ಹರಿದು ಹೋಗಿದೆ. ತಕ್ಷಣ ಆಕೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾಳೆ.

ಟಿಪ್ಪರ್ ಚಾಲಕನ ಅಜಾಗರೂಕತೆ, ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

*ರಾಜ್ಯದ ಈ ಸ್ಥಳದಲ್ಲಿ ದಕ್ಷಿಣ ಅಯೋಧ್ಯಾ ರಾಮ ಮಂದಿರ ನಿರ್ಮಾಣ*

https://pragati.taskdun.com/ramanagararama-mandiraashwathatha-narayanabelagavi/

Related Articles

Back to top button