Karnataka News

*ಗೂಡ್ಸ್ ವಾಹನ ಗುದ್ದಿದ ರಭಸಕ್ಕೆ ಮಹಿಳೆಯ ತಲೆಯೇ ಕಟ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಗೂಡ್ಸ್ ವಾಹನ ಡಿಕ್ಕಿಯಾದ ರಭಸಕ್ಕೆ ಮಹಿಳೆಯ ತಲೆಯೇ ಕಟ್ ಆಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಮುದ್ದಹಳ್ಳಿ ಬಳಿ ನಡೆದಿದೆ.

ಮೈಸೂರು-ಊಟಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಗೂಡ್ಸ್ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಮಹಿಳೆಯ ತಲೆಯೇ ಕಟ್ ಆಗಿ ಬಿದ್ದಿದೆ. ನಡುರಸ್ತೆಯಲ್ಲಿ ರಕ್ತದ ಕೋಡಿಯೇ ಹರಿದಿದೆ. ಅಪಘಾತದ ಭೀಕರತೆ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button