Belagavi NewsBelgaum NewsKannada NewsKarnataka NewsNationalPolitics

*ಸತೀಶ್ ಜಾರಕಿಹೊಳಿ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಸರಕಾರದಲ್ಲಿರುವ ಸಚಿವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಆರೋಪಿಯನ್ನು ಬೆಳಗಾವಿ ಮಾರ್ಕೇಟ್ ಪೊಲೀಸರು ಬಂಧಿಸಿದ್ದಾರೆ.

ಸತೀಶ್ ಜಾರಕಿಹೊಳಿಗೆ ನಿಂದನೆ ಹಿನ್ನೆಲೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಸಚಿವರ ಆಪ್ತ ವಿಜಯ ತಳವಾರ್ ಎಂಬುವವರಿಂದ ಕೇಸ್ ದಾಖಲಿಸಲಾಗಿತ್ತು. ಸಚಿವ ಸತೀಶ ಜಾರಕಿಹೊಳಿ ವಿರುದ್ಧ ಅವಾಚ್ಯ ಶಬ್ದಗಳ ನಿಂದನೆ ಮಾಡಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. 

ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದ  ತುಮಕೂರು ಮೂಲದ ಮೋಹಿತ್ ನರಸಿಂಹಮೂರ್ತಿ(38) ಎಂಬ ವ್ಯಕ್ತಿಯ ವಿರುದ್ಧ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.‌ ಆರೋಪಿಯನ್ನು ಬಂಧಿಸಿದ ಬೆಳಗಾವಿ ಮಾರ್ಕೆಟ್ ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ಪ್ರಕರಣದ ಬೆನ್ನು ಹತ್ತದ ಪೊಲೀಸರು, ತುಮಕೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. 

ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೆ.ಎಚ್.ಮುನಿಯಪ್ಪ ಸೇರಿದಂತೆ ಸರಕಾರದಲ್ಲಿರುವ ಸಚಿವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪದ ಬಳಕೆ ಮಾಡಿದ್ದ ಆರೋಪಿ ನರಸಿಂಹ ಮೂರ್ತಿಯನ್ನು ಬೆಳಗಾವಿ ಮಾರ್ಕೇಟ್ ಪೊಲೀಸರು ಬಂಧಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button