Belagavi NewsBelgaum NewsCrime

*ಜಿಮ್ ಖಾನಾ ಕ್ಲಬ್‌ನಲ್ಲಿ ನಡೆದ ಫೈರಿಂಗ್ ಪ್ರಕರಣದ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ  ಕ್ಯಾಂಪ್‌ ಪ್ರದೇಶದಲ್ಲಿ ಇರುವ ಜಿಮ್ ಖಾನಾ ಕ್ಲಬ್‌ನಲ್ಲಿ ರೌಡಿಶೀಟರ್ ಮೇಲೆ ಫೈರಿಂಗ್ ನಡೆದಿತ್ತು. ಈ ಪ್ರಕರಣದ ತನಿಖೆ ನಡೆಸಿದ  ಪೊಲೀಸರು ಶೂಟ್ ಮಾಡಿದ ಆರೋಪಿಯನ್ನು ಕರೆ ತಂದಿದ್ದ ಕಾರ್ ಚಾಲಕನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ರೌಡೀಶೀಟರ್ ಸುರೇಶ ಜಾಲಗಾರ ಮೇಲೆ ಫೈರಿಂಗ್ ನಡೆಸಲಾಗಿತ್ತು ಫೈರಿಂಗ್ ನಡೆಸಿದ ಆರೋಪಿಗಳಿಗೆ ಸಹಕಾರ ನೀಡಿದ ಆರೋಪದಡಿ ಬಂಧಿಸಲಾಗಿದೆ. 

ಬಳಿಕ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ನಡೆಸಿದರು. ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ರವಾನಿಸಿದ್ದಾರೆ.

ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಫೈರಿಂಗ್ ಸಂಚು ಹಾಗೂ ಕೃತ್ಯದಲ್ಲಿ ಭಾಗಿಯಾಗಿರುವವರ ಪಾತ್ರದ ಕುರಿತು ತನಿಖೆ ಮುಂದುವರಿದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button