ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನ್ಯಾಯಾಲಾಕ್ಕೆ ಹಾಜರುಪಡಿಸಲೆಂದು ಕರೆತಂದಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಮೃತಪಟ್ಟ ಘಟನೆ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಆರೋಪಿ ವಿನೋದ್ ಮೃತ ವ್ಯಕ್ತಿ. 2017ರಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿ ವಿನೋದ್ ನಾಪತ್ತೆಯಾಗಿದ್ದ. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಆದರೆ ಆರೋಪಿ ವಿನೋದ್ ಕೋರ್ಟ್ ವಿಚಾರಣೆಗೂ ಹಾಜರಾಗದೇ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ವಿನೋದ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು.
ಪ್ರಕರಣ ಸಂಬಂಧ ಕಾಟನ್ ಪೇಟೆ ಪೊಲೀಸರು ನಿನ್ನೆ ಆರೋಪಿ ವಿನೋದ್ ನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಇಂದು ಕೋರ್ಟ್ ಗೆ ಹಾಜರು ಪಡಿಸಲು ಸಿದ್ಧತೆ ನಡೆಸಲಾಗಿತ್ತು. ಆದರೆ ಇಂದು ಬೆಳಿಗ್ಗೆ ಠಾಣೆಗೆ ಬಂದು ಪೊಲೀಸ್ ಸಿಬ್ಬಂದಿ ನೋಡಿದಾಗ ಆರೋಪಿ ವಿನೋದ್ ಪ್ರಜ್ಞೆತಪ್ಪಿ ಬಿದ್ದಿದ್ದ. ತಕ್ಷಣ ಪೊಲೀಸರು ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆಸ್ಪತ್ರೆಗೆ ಬರುವ ಮುನ್ನವೇ ಆರೋಪಿ ಸಾವನ್ನಪ್ಪಿದ್ದ ಎಂದು ವೈದ್ಯರು ತಿಳಿಸಿದ್ದಾರೆ.
*ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ಅನಧಿಕೃತ ಹಣ ಪತ್ತೆ; PWD ಸಹಾಯಕ ಇಂಜಿನಿಯರ್ ವಶಕ್ಕೆ*
https://pragati.taskdun.com/vidhanasoudha10-5-lakh-foundpwd-assistant-engineer-arrest/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ