
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅತ್ಯಾಚಾರ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ಆರೋಪಿ ಸಂತ್ರಸ್ತೆಯನ್ನೇ ಮದುವೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್, ಪೊಲೀಸರು ದಾಖಲಿಸಿದ್ದ ಅತ್ಯಾಚಾರ, ಹಣ ವಸೂಲಿ ಹಾಗೂ ಜೀವ ಬೆದರಿಕೆ ಪ್ರಕರಣವನ್ನು ರದ್ದುಗೊಳಿಸಿದೆ.
ಅತ್ಯಾಚಾರ ಪ್ರಕರಣದ ಆರೋಪಿ ಹಾಗೂ ಸಂತ್ರಸ್ತೆ ಜಂಟಿಯಾಗಿ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ಪರಿಗಣಿಸಿತು. ಇದೇ ವೇಳೆ ಆರೋಪಿ ಆಕೆಯನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಹಾಗೂ ಯಾವುದೇ ತೊಂದರೆ ನೀಡದಂತೆ ಸೂಚಿಸಿ ರದ್ದುಪಡಿಸಿದೆ.
2022 ರ ಅಕ್ಟೋಬರ್ ನಲ್ಲಿ 30 ರಂದು ಸಂತ್ರಸ್ತೆ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದರು.
ಈ ಪ್ರಕರಣವನ್ನು ರದ್ದು ಕೋರಿ ಆರೋಪಿ ಹೈಕೋರ್ಟ್ ಮೆಟ್ಟಿಲೇರಿದ್ದರು. ತಾನು ಸಂತ್ರಸ್ತೆಯನ್ನು ವಿವಾಹವಾಗಿದ್ದರೂ ಪೊಲೀಸರು ತನ್ನ ವಿರುದ್ಧ ಎಫ್ಐಆರ್ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಕ್ರಮದ ಬಗ್ಗೆ ಪ್ರಶ್ನಿಸಿದ್ದರು. ತನ್ನ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣ ರದ್ದುಪಡಿಸಬೇಕು ಎಂದು ಕೋರಿದ್ದರು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಸಿ.ಎನ್ ರಾಜು ವಾದ ಮಂಡಿಸಿ, ಆರೋಪಿ ಹಾಗೂ ಸಂತ್ರಸ್ತೆ ಪರಸ್ಪರ ಪ್ರೀತಿಸುತ್ತಿದ್ದರು. ಭಿನ್ನಾಭಿಪ್ರಾಯ ಮೂಡಿದ ನಂತರ ಸಂತ್ರಸ್ತೆ ದೂರು ಸಲ್ಲಿಸಿದ್ದಾರೆ. ಆ ನಂತರ ದೂರು ಹಿಂಪಡೆಯುವುದಾಗಿ ತಿಳಿಸಿದ್ದರೂ ಪೊಲೀಸರು ಒಪ್ಪದೆ ಎಫ್ಐಆರ್ ದಾಖಲಿಸಿದ್ದಾರೆ. ಆರೋಪಿ ಸಂತ್ರಸ್ತೆಯನ್ನು ವಿವಾಹವಾಗಿದ್ದಾರೆ ಎಂದು ವಾದಿಸಿದ್ದರು.
ಪ್ರಸ್ತುತ ಆರೋಪಿ ಹಾಗೂ ಸಂತ್ರಸ್ತೆ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮದುವೆಯಾಗಿ ನೆಮ್ಮದಿಯ ಸಂಸಾರ ನಡೆಸುತ್ತಿದ್ದಾರೆ. ಪ್ರಕರಣ ಹಿಂಪಡೆಯಲು ಇಬ್ಬರೂ ಜಂಟಿ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಿದ್ದರು. ಇನ್ನು ಮುಂದೆ ಲೈಸನ್ಸ್ ಇರುವ ಬಂದೂಕು ಪೊಲೀಸ್ ಠಾಣೆಯಲ್ಲಿ ಇರಿಸಿಕೊಳ್ಳುವಂತಿಲ್ಲ
https://pragati.taskdun.com/licensed-firearms-can-no-longer-be-kept-in-police-stations/
ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದುಂಡಾವರ್ತಿ
https://pragati.taskdun.com/bjp-mp-tejaswi-surya-opened-the-emergency-exit-door-of-the-plane/
*ಬೇರೆ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸುವವರು ಲೀಡರ್ ಅಲ್ವಾ?; 2 ಕ್ಷೇತ್ರಗಳ ಸ್ಪರ್ಧೆ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟನೆ*
https://pragati.taskdun.com/siddaramaiahpressmeetbagalakote/