
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದ ಉದ್ಯಮಬಾಗದ ಅರುಣ ಇಂಜಿನಿಯರಿಂಗ್ ಫ್ಯಾಕ್ಟರಿ ಎದುರಿಗೆ, ರಸ್ತೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗೋವಾ ರಾಜ್ಯದಲ್ಲಿ ಮಾತ್ರ ಮಾರಾಟಕ್ಕಿರುವ ವಿವಿಧ ಕಂಪನಿಯ ರಮ್, ವೋಡಾ, ವಿಸ್ಕಿ ಒಟ್ಟು 16 ಸರಾಯಿ ಬಾಟಲಿಗಳನ್ನು ಕೈಚೀಲದಲ್ಲಿಟ್ಟುಕೊಂಡು ಮಾರಾಟದಲ್ಲಿ ತೊಡಗಿದ್ದಾಗ ಉದ್ಯಮಬಾಗ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಪರಮೇಶ್ವರ ದೇವಪ್ಪ ನಾಯಿಕ (50) ಬಂದಿತ ಆರೋಪಿ. ಉದ್ಯಮಬಾಗ ಪೊಲೀಸ್ ಠಾಣೆಯ ಪಿಎಸ್ಐ ಕಿರಣ ಸಿ ಹೊನಕಟ್ಟಿ ಹಾಗೂ ಸಿಬ್ಬಂದಿಯವರು ದಾಳಿ ಮಾಡಿ, ಒಟ್ಟು ರೂ.4,760/- ಮೌಲ್ಯದ 12 ಲೀಟರ್ ನಷ್ಟು ಅಕ್ರಮ ಸರಾಯಿ ಹಾಗೂ ರೂ.3,550 ನಗದು ಹಣವನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿರುದ್ಧ ಉದ್ಯಮಬಾಗ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ.15/2026 ಕಲಂ.32, 34 ಅಬಕಾರಿ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಮುಂದುವರೆಸಲಾಗಿದೆ.

