Belagavi NewsBelgaum News

*3.50 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರೆಯ ನಿಮಿತ್ಯವಾಗಿ ಗ್ರಾಮದ ಒಳಾಂಗಣ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.


ಈ ಭಾಗದ ಶಾಸಕಿಯೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂದ ಸುಮಾರು ಮೂರೂವರೆ ಕೋಟಿ (3.50 ಕೋಟಿ ರೂ) ರೂ,ಗಳ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.


ಜಾತ್ರೆಗೆ ಬೇಕಾಗಿರುವ ಸಕಲ ಸಹಕಾರವನ್ನು ಕೊಡುವುದಾಗಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರು ಭರವಸೆ ನೀಡಿದ್ದಾರೆ. ಸಾರ್ವಜನಿಕರಿಗೆ ಹಾಗೂ ಅವರ ಆಸ್ತಿ-ಪಾಸ್ತಿಗಳಿಗೆ ಯಾವುದೇ ತೊಂದರೆಗಳಾಗದಂತೆ ನಿಗದಿತ ಸಮಯದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

Home add -Advt

ಈ ವೇಳೆ ಗ್ರಾಮದ ಹಿರಿಯರು ಹಾಗೂ ಪಿಕೆಪಿಎಸ್ ಅಧ್ಯಕ್ಷರಾದ ಗಂಗಣ್ಣ ಕಲ್ಲೂರ, ಮಹಾಲಕ್ಷ್ಮಿ ದೇವಸ್ಥಾನ ಟ್ರಸ್ಟ್ ಕಮೀಟಿಯವರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಗ್ರಾಮದ ನಾಗರಿಕರು, ಸುಳೇಭಾವಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button