ಪ್ರಗತಿವಾಹಿನಿ ಸುದ್ದಿ: ಇತ್ತೀಚೆಗೆ ಮೈಸೂರಿನ ಅನ್ನದಾನೇಶ್ವರ ಮಠದ ಹಿರಿಯ ಶ್ರೀಗಳ ಹತ್ಯೆ ಘಟನೆ ಮಾಸುವ ಮುನ್ನವೇ ಇದೀಗ ಮತ್ತೋರ್ವ ಸ್ವಾಮೀಜಿಯೊಬ್ಬರನ್ನು ಆಶ್ರಮದಲ್ಲಿಯೇ ಕೊಲೆ ಮಾಡಿರುವ ಘಟನೆ ನಡೆದಿದೆ.
ಆಚಾರ್ಯ ಚಿನ್ಮಯಾನಂದ ಸ್ವಾಮೀಜಿಯವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ನಡೆದಿದೆ. ಮಾಲೂರು ತಾಲೂಕಿನ ಸಂತಹಳ್ಳಿಯಲ್ಲಿನ ಆನಂದ ಮಾರ್ಗ ಆಶ್ರದಲ್ಲಿ ಚಿನ್ಮಯಾನಂದ ಅವರ ಹತ್ಯೆ ಮಾಡಲಾಗಿದೆ.
ಎರಡು ಗುಂಪುಗಳ ನಡುವೆ ಗಲಾಟೆಯಾಗಿದ್ದು, ಈ ವೇಳೆ ಆಚಾರ್ಯ ಧರ್ಮ ಪ್ರಾಣಾನಂದ ಅವರ ಗುಂಪು ಆಚಾರ್ಯ ಚಿನ್ಮಯಾನಂದ ಅವರ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.
ಮಾಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ