National

*ಟ್ರಕ್ ಮತ್ತು ಕಾರ್ ನಡುವೆ ಅಪಘಾತ: 6 ಕಾಲೇಜು ವಿದ್ಯಾರ್ಥಿಗಳ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಟ್ರಕ್ ಮತ್ತು ಇನ್ನೋವಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 6 ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆದಿದೆ.

ಮಾಹಿತಿ ಪ್ರಕಾರ ಕಾರಿನಲ್ಲಿ 7 ವಿದ್ಯಾರ್ಥಿಗಳು ಇದ್ದರು. ಅದರಲ್ಲಿ ಮೂವರು ಬಾಲಕರು ಮತ್ತು ಮೂವರು ಹುಡುಗಿಯರು ಸೇರಿದಂತೆ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತರು ಹಾಗೂ ಗಾಯಾಳುಗಳೆಲ್ಲರೂ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ.

Home add -Advt

ಅಪಘಾತದ ರಭಸಕ್ಕೆ ಕಾರು ಜಖಂಗೊಂಡಿದೆ. ಕಾರನ್ನು ಕಟ್ ಮಾಡಿ ಮೃತದೇಹ ಹಾಗೂ ಗಾಯಾಳುಗಳನ್ನು ಹೊರ ತೆಗೆಯಲಾಯಿತು. ಮೃತರ ದೇಹಗಳು ಛಿದ್ರಗೊಂಡಿವೆ. ಆದರೆ, ಘಟನೆ ಹಿನ್ನೆಲೆಯಲ್ಲಿ ಟ್ರಕ್ ಚಾಲಕ ವಾಹನವನ್ನು ಬಿಟ್ಟು ಪರಾರಿಯಾಗಿದ್ದಾನೆ. ಮಾಹಿತಿ ಪಡೆದ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ತೀವ್ರವಾಗಿ ಜಖಂಗೊಂಡ ಕಾರಿನಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

Related Articles

Back to top button