Latest

ಮಹಿಳೆ ಮೇಲೆ ಆಸಿಡ್ ದಾಳಿ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಮೆಣಸೆಯಲ್ಲಿ ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಚಿಕ್ಕಮಗಳೂರಿನ 2ನೇ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.

ಅಪರಾಧಿಗಳಾದ ಗಣೇಶ್, ಕಬೀರ್, ವಿನೋದ್, ಅಬ್ದುಲ್ ಮಜೀದ್ ಎಂಬುವವರಿಗೆ ಜೀವಾವಧಿ ಶಿಕ್ಷೆ ಹಾಗೂ 20 ಲಕ್ಷ ದಂಡ ವಿಧಿಸಿ ನ್ಯಾಯಾಧೀಶ ಮಂಜುನಾಥ್ ಸಂಗ್ರೇಶಿ ತೀರ್ಪು ಪ್ರಕಟಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆಯಲ್ಲಿ 2015 ಏಪ್ರಿಲ್ 18ರಂದು ಮಹಿಳೆ ಮೇಲೆ ಆಸಿಡ್ ದಾಳಿ ನಡೆಸಲಾಗಿತ್ತು. ಬರೋಬ್ಬರಿ 6 ವರ್ಷಗಳ ಕಾಲ ಸುದೀರ್ಘ ವಿಚಾರಣೆ ಬಳಿಕ ಅಪರಾಧಿಗಳಿಗೆ ಶಿಕ್ಷೆ ಪ್ರಕಟವಾಗಿದೆ.
ಏಕಕಾಲದಲ್ಲಿ 40 ಕಡೆಗಳಲ್ಲಿ 300 ಎಸಿಬಿ ಅಧಿಕಾರಿಗಳ ದಾಳಿ

Home add -Advt

Related Articles

Back to top button