ಪ್ರಗತಿವಾಹಿನಿ ಸುದ್ದಿ: ಯುವನಕನೊಬ್ಬನ ಮೇಲೆ ಆ್ಯಸಿಡ್ ದಾಳಿ ನಡೆದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸೆ.21ರಂದು ನಾಗೇಶ್ ಕೊಂಡ ಎಂಬ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದು ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಸದ್ಯ ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ನಡುವೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಗಾಯಾಳು ಹೇಳಿಕೆ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ