
ಪ್ರಗತಿವಾಹಿನಿ ಸುದ್ದಿ: ಅವಧಿ ಮೀರಿ ಹೋಟೆಲ್ ತೆರೆಯುವ ವಿಚಾರವಾಗಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಕೃಷ್ಣಮೂರ್ತಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ತಮ್ಮ ಕಚೇರಿಯಲ್ಲೇ 30 ಸಾವಿರ ಸ್ವೀಕರಿಸುತ್ತಿದ್ದಾಗ ಎಸಿಪಿ ಕೃಷ್ಣಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಸಾಗರ್ ಹೋಟೆಲ್ ಮಾಲೀಕರಿಗೆ ಪ್ರತಿ ತಿಂಗಳಿಗೆ 32 ಸಾವಿರ ರೂಪಾಯಿ ಹಣ ನೀಡುವಂತೆ ಎಸಿಪಿ ಕೃಷ್ಣಮೂರ್ತಿ ಬೇಡಿಕೆ ಇಟ್ಟಿದ್ದರು. ಎಸಿಪಿ ಕೃಷ್ಣಮೂರ್ತಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆಡಿಯೋ ಲಭ್ಯವಾಗಿತ್ತು. ಇದರ ಆಧಾರದ ಮೇಲೆ ಸಾಗರ್ ಹೋಟೆಲ್ ಮಾಲೀಕರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ಎಫ್‌ಐಆರ್ ದಾಖಲಿಸಿದ್ದ ಲೋಕಾಯುಕ್ತ ಪೊಲೀಸರು, ಬಲೆ ಬೀಸಿ ಕಾರ್ಯಾಚರಣೆ ನಡೆಸಿದರು.
ಹೋಟೆಲ್ ಮಾಲೀಕ 30 ಸಾವಿರ ರೂಪಾಯಿ ಹಣ ನೀಡುತ್ತಿದ್ದಾಗ, ಲೋಕಾಯುಕ್ತ ಪೊಲೀಸರು ಎಸಿಪಿ ಕೃಷ್ಣಮೂರ್ತಿಯನ್ನು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.




