Film & EntertainmentKarnataka NewsNationalPolitics

*ದರ್ಶನ್ ಜಾಮೀನು ರದ್ದತಿಗೆ ಕ್ರಮ: ಗೃಹ ಸಚಿವ ಪರಮೇಶ್ವರ್*

ಪ್ರಗತಿವಾಹಿನಿ ಸುದ್ದಿ: ರೇಣುಕಾಸ್ವಾಮಿ ಕೊಲೆ ನಡೆದ ಜಾಗದಲ್ಲಿ ನಟ ದರ್ಶನ್ ಇದ್ದ ಬಗ್ಗೆ ಫೋಟೋ ಸಿಕ್ಕ ಹಿನ್ನೆಲೆ ದರ್ಶನ್ ಜಾಮೀನು ರದ್ದತಿ ಬಗ್ಗೆ ಕ್ರಮ ಜರುಗಿಸೋದಾಗಿ ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತಾಡಿದ ಅವರು, ದರ್ಶನ್ ಜತೆಗಿದ್ದ ಇತರೆ ಆರೋಪಿಗಳ ಮೊಬೈಲ್ ಫೋನ್ ಗಳನ್ನ FSL ವರದಿಗಾಗಿ ಹೈದ್ರಾಬಾದ್ ಗೆ ಕಳುಹಿಸಲಾಗಿತ್ತು. ಇದರಲ್ಲಿ ದರ್ಶನ್ ಇರುವ ಫೋಟೋಗಳು ಲಭ್ಯವಾಗಿದೆ. ಮೇಲ್ನೋಟಕ್ಕೆ ದರ್ಶನ್ ಪಾತ್ರ ದೊಡ್ಡದಾಗಿ ಕಾಣುತ್ತಿದೆ. ಹೀಗಾಗಿ ದರ್ಶನ್ ಜಾಮೀನು ರದ್ದು ಮಾಡುವಂತೆ ಕೋರ್ಟ್‌ ಗೆ ಮನವಿ ಸಲ್ಲಿಸುವುದಾಗಿ ಹೇಳಿದ್ದಾರೆ.

ಇನ್ನು, ದರ್ಶನ್ ಬೆನ್ನು ಆಪರೇಶನ್ ಮಾಡಿಸಿಲ್ಲ. ಹಾಗೆಯೇ ಕಾಲ ಕಳೆಯುತ್ತಿದ್ದಾರೆ. ಕೋರ್ಟ್ ಈ ಬಗ್ಗೆ ಗಮನ ಹರಿಸಬೇಕು. ಸೂಕ್ತ ಆದೇಶ ನೀಡಬೇಕು ಎಂದು ಸಚಿವರು ಹೇಳಿದರು.

Home add -Advt

Related Articles

Back to top button